ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಯಚೂರು ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
DHFWS Recruitment in Kannada
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನು ಕೆಲವೇ ದಿನ ಅಂದರೆ 11-03-2026 ವರೆಗೆ ಅವಕಾಶ ಇರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜಸ್ಟ್ 10th ಪಾಸ್ ಆಗಿದ್ರೆ ಸಾಕು. ನೀವೇನಾದರೂ 10th ಪಾಸ್ ಆಗಿ ಜಾಬ್ ಹುಡುಕುತ್ತಿದ್ದಿರಾ? ಹಾಗಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ವೇತನ ಶ್ರೇಣಿ ಎಷ್ಟೆಷ್ಟು ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ. ಇದೇ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡ ರೀಡರ್. ಇನ್ ಗೆ ಭೇಟಿ ನೀಡಿ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಯಚೂರು (DHFWS) |
| ಹುದ್ದೆಯ ಹೆಸರು | ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ |
| ಹುದ್ದೆಯ ಸಂಖ್ಯೆ | 20 ಹುದ್ದೆಗಳು |
| ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | 11-03-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ವಿವರಣಾತ್ಮಕ ನೋಟ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಯಚೂರು (DHFWS) ಸಂಸ್ಥೆಯು 2026 ರ ನೇಮಕಾತಿಯಲ್ಲಿ ಒಟ್ಟು 20 ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಕೇವಲ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೆಳಗಿನ ಹಂತದಲ್ಲಿ ಹುದ್ದೆಯ ಸಂಕ್ಷಿಪ್ತ ವಿವರ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
ಹುದ್ದೆಯ ವಿವರ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಯಚೂರು (DHFWS) 2026 ರ ನೇಮಕಾತಿಯಲ್ಲಿ ಒಟ್ಟು 20 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವ ಹುದ್ದೆಗೆ ಎಷ್ಟೆಷ್ಟು ಪೋಸ್ಟ್ ಖಾಲಿ ಇದೆ ಎನ್ನುವುದನ್ನು ಈ ಕೆಳೆಗೆ ತಿಳಿದು ಕೊಳ್ಳೋಣ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ | 19 ಹುದ್ದೆಗಳು |
| ಹೆಲ್ತ್ ಇನ್ಸ್ಪೆಕ್ಟರ್ | 01 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಗಳು:
1. ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಥವಾ PUC ಅಥವಾ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
- ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಹುದ್ದೆಗೆ ಸಂಬಂಧಿಸಿದ ತರಬೇತಿಯನ್ನು ಹೊಂದಿರಬೇಕು.
- NSLC ಬೇಸ್ ಟೆಸ್ಟ್ ಗೆ ಅರ್ಹತೆ ಪಡೆದುಕೊಂಡಿರಬೇಕು.
- KUC ಹಾಗೂ KUCS ಸಂಸ್ಥೆಯಲ್ಲಿ ಅರ್ಹತೆಯನ್ನು ಪಡೆದುಕೊಂಡಿರಬೇಕು ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ 2-3 ವರ್ಷ ವೃತ್ತಿ ಅನುಭವ ಹೊಂದಿರಬೇಕು.
2. ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್
- ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ಹಾಗೂ ಹುದ್ದಗೆ ಸಂಬಂಧಿಸಿದ ತರಬೇತಿಯನ್ನು ಪಡೆದುಕೊಂಡು ಪ್ರಮಾಣಪತ್ರವನ್ನು ಹೊಂದಿರಬೇಕು.
ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರ:
ಸಾಮಾನ್ಯವಾಗಿ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರವನ್ನು ನಿಗದಿಪಡಿಸಲಾಗುತ್ತದೆ ಅದೇ ರೀತಿಯಲ್ಲಿ ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹುದ್ದೆ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ST ಅಭ್ಯರ್ಥಿಗಳು , ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನವನ್ನು ನಿಗದಿಪಡಿಸಲಾಗಿದೆ.
| ಹುದ್ದೆಯ ಹೆಸರು | ವೇತನ ಶ್ರೇಣಿ |
| ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹುದ್ದೆಗಳು | ಮಾಸಿಕ ₹14,044 – ₹15,397 ವರೆಗೆ |
| ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳು | ಮಾಸಿಕ ₹15,397 ವರೆಗೆ |
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಬೇಕಾದರೆ ಈ ಕೆಳಗೆ ನೀಡಲಾದ ದಾಖಲೆಗಳನ್ನು ಸಾಮಾನ್ಯವಾಗಿ ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ. ಅವುಗಳೆಂದರೆ,
- ಅಭ್ಯರ್ಥಿಗಳ ಆಧಾರ್ ಕಾರ್ಡ್
- ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಅಭ್ಯರ್ಥಿಗಳ ಸಹಿ
- ಪಾಸ್ ಪೋರ್ಟ್ ಅಳತೆಯ ಫೋಟೋ
- ತರಬೇತಿ ಪ್ರಮಾಣಪತ್ರ
- ಅನುಭವ ಪ್ರಮಾಣಪತ್ರ
ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
- ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿತ ವಿವರ, ಶೈಕ್ಷಣಿಕ ವಿವರ, ಹಾಗೂ ಅನುಭವ ವಿವರವನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ತರಬೇತಿ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿದ ಹಾಗೂ ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ನಿಗದಿಪಡಿಸಿದ ಕೊನೆಯ ದಿನಾಂಕ 11-03-2026 ರೊಳಗೆ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ: ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
- ದಾಖಲಾತಿ ಪರಿಶೀಲನೆ: ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮಾಡಲು ಕರೆಯಲಾಗುತ್ತದೆ.
| ಇಲ್ಲಿ ಗಮನಿಸಿ: “ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಆಯ್ಕೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಂದರೆ ವಿವಿಧ ವರ್ಗಗಳಿಗೆ ಒಂದಿಷ್ಟು ಹುದ್ದೆಗಳು ಎಂದು ನಿಗದಿಪಡಿಸಲಾಗುತ್ತದೆ.” |
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ವಿವರಗಳು | ಪ್ರಮುಖ ದಿನಾಂಕಗಳು |
| ಹುದ್ದೆಯ ನೇಮಕಾತಿ ಅಧಿಸೂಚನೆ ಸೂಚನೆ ಪ್ರಕಟಗೊಂಡ ದಿನಾಂಕ | 23-02-2026 |
| ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಈಗಾಗಲೇ ಆರಂಭ ಗೊಂಡಿದೆ (25-02-2026) |
| ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-03-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:
| ವಿವರಗಳು | ಪ್ರಮುಖ ಲಿಂಕುಗಳು |
| ಅಧಿಕೃತ ಅಧಿಸೂಚನೆ PDF ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ, ರಾಯಚೂರು (DHFWS) 2026 ರಲ್ಲಿ ಒಟ್ಟು 20 ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದು, ಅರ್ಜಿ ಸಲ್ಲಿಸಲು ಆಸಕ್ತರಾಗಿದ್ದಾರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಸರ್ಕಾರಿ ಉದ್ಯೋಗದ ಕನಸ್ಸನ್ನು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು ಸಂಸ್ಥೆಯು ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಯಲ್ಲಿ ಉತ್ತೀರ್ಣರಾಗಿರಬೇಕು.
ಹೆಲ್ತ್ ಅಸಿಸ್ಟೆಂಟ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಥವಾ PUC ಅಥವಾ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 11-03-2026 ಕೊನೆಯ ದಿನಾಂಕವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- PMMVY: ರೂ.11,000 ಸಹಾಯಧನ! ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ಬಂಪರ್ ಗಿಫ್ಟ್!
- SSP Scholarship: ಸಮಯ ಯಾರಿಗೂ ಕಾಯಲ್ಲ! ಮಾರ್ಚ್ 15ರ ಒಳಗಡೆ SSP ಸ್ಕಾಲರ್ಶಿಪ್ಗೆ ಅಪ್ಲೈ ಮಾಡಿ.
- Heavy Rain Places: ಕರ್ನಾಟಕದ ಮಳೆಯ ಶ್ರೇಷ್ಠ ತಾಣಗಳು ಮತ್ತು ಪ್ರಕೃತಿ ವೈವಿಧ್ಯ

