ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿಯನ್ನು ಹೊಂದಿದ್ದೀರಾ? ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವುದು ನಿಮ್ಮ ಬಹು ವರ್ಷದ ಕನಸೇ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್!
IDBI Recruitment in kannada
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ವು ಸ್ಥಾಪನೆಯ 60 ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮದಲ್ಲಿದ್ದು, 2026 ರ ನೇಮಕಾತಿಯಲ್ಲಿ ಒಟ್ಟು 13,00 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ನಾಳೆಯಿಂದ ಅಂದರೆ 08-03-2026 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ನಾಳೆಯಿಂದ ಪ್ರಾರಂಭಗೊಂಡು 19-03-2026 ರಂದು ಕೊನೆಗೊಳ್ಳಲಿದೆ.
ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, ಈ ಕೆಳಗೆ ನೀಡಲಾದ ವಯೋಮಿತಿ ವಿವರ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಹುದ್ದೆಗೆ ಸಂಬಂಧಿಸಿದ ಇನ್ನಿತರ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡ ರೀಡರ್. ಇನ್ ಗೆ ಭೇಟಿ ನೀಡಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) |
| ಹುದ್ದೆಯ ಹೆಸರು | ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು |
| ಒಟ್ಟು ಹುದ್ದೆಗಳ ಸಂಖ್ಯೆ | 1,300 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | 19-03-2026 |
ಹುದ್ದೆಯ ಕಿರು ಪರಿಚಯ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಸಂಸ್ಥೆಯು 2026-27 ನೇ ಸಾಲಿನ ನೇಮಕಾತಿಯಲ್ಲಿ ಒಟ್ಟು 1,300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ಮಂಡಳಿಯಲ್ಲಿ ಅಥವಾ ಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಹಾಗೂ ಕನಿಷ್ಠ 20 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಹುದ್ದೆಯ ವಿವರ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಸಂಸ್ಥೆಯು ಒಟ್ಟು 1,300 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳನ್ನು ಎರಡು ಪ್ರಮುಖ ವಿಭಾಗಗಳಾಗಿ ವಿಂಗಡಣೆ ಮಾಡಲಾಗಿದೆ. ಅವುಗಳು ಯಾವುದು ಎನ್ನುವುದನ್ನು ಈ ಕೆಳಗೆ ತಿಳಿದುಕೊಳ್ಳೋಣ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘A’) | 200 ಹುದ್ದೆಗಳು |
| ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘O’) | 1,100 ಹುದ್ದೆಗಳು |
ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳು:
- ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಯಾವ ಹುದ್ದೆಗೆ ಎಷ್ಟೆಷ್ಟು ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
1. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು:
ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘A’) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
2. ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘O’) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ಮೀಸಲಾತಿ ನಿಯಮಗಳ ಅನ್ವಯ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇದರ ಕುರಿತು ಸಂಕ್ಷಿಪ್ತ ಮಾಹಿತಿ ಈ ಕೆಳಕಂಡಂತಿದೆ.
- PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ:
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷಕ್ಕೆ ₹6.14 ಲಕ್ಷದಿಂದ ₹6.50 ಲಕ್ಷ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
- ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ರವಾನೆ ಭತ್ಯೆ ಹಾಗೂ ಇನ್ನಿತರ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
- ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷಕ್ಕೆ ₹9 ಲಕ್ಷದಿಂದ ₹9.50 ಲಕ್ಷ ವೇತನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
ಅರ್ಜಿ ಶುಲ್ಕ:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕ ಈ ಕೆಳಕಂಡಂತಿದೆ. ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ PwBD ಅಭ್ಯರ್ಥಿಗಳಿಗೆ: ₹200
- ಸಾಮಾನ್ಯ, ಒಬಿಸಿ, ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹1,000
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಸಾಮಾನ್ಯವಾಗಿ, ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಬೇಕಾದರೆ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ಅಭ್ಯರ್ಥಿಗಳ ಆಧಾರ್ ಕಾರ್ಡ್
- ಅಭ್ಯರ್ಥಿಗಳ ಪದವಿ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಅಭ್ಯರ್ಥಿಗಳ ಸಹಿ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಹಾಗೂ ಇತರೆ ದಾಖಲೆಗಳು
ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳಗೆ ನೀಡಿರುವಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು IDBI ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://www.idbi.bank.in/ ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ಕೆರಿಯರ್ ವಿಭಾಗವನ್ನು ಆಯ್ಕೆಮಾಡಿ.
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಕ್ಲಿಕ್ ಮಾಡಿ ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ.
- ನಂತರ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿತ ವಿವರ, ಶೈಕ್ಷಣಿಕ ವಿವರವನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಅಭ್ಯರ್ಥಿಗಳ ಆಧಾರ್ ಕಾರ್ಡ್, ಪದವಿ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿದ ಹಾಗೂ ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ನಿಗದಿಪಡಿಸಿದ ಕೊನೆಯ ದಿನಾಂಕ 19-03-2026 ರೊಳಗೆ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಲಾದ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ವೈಯಕ್ತಿಕ ಸಂದರ್ಶನ
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ವಿವರಗಳು | ಪ್ರಮುಖ ದಿನಾಂಕಗಳು |
| ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 08-03-2026 |
| ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-03-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:
| ವಿವರಗಳು | ಪ್ರಮುಖ ಲಿಂಕುಗಳು |
| ಅಧಿಕೃತ ಅಧಿಸೂಚನೆ PDF ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
IDBI ಬ್ಯಾಂಕ್ ಒಟ್ಟು 1300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದೋಗದ ಕನಸ್ಸನ್ನು ಕಾಣುತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ನೀವೇನಾದರೂ ಬ್ಯಾಂಕಿಂಗ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿದ್ದೀರಾ? ಹಾಗಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
IDBI ನಲ್ಲಿ ಒಟ್ಟು 1300 ಹುದ್ದೆಗಳು ಖಾಲಿ ಇದೆ.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ಒಟ್ಟು 1,100 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದೆ.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹1,000 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಇತರೆ ಪ್ರಮುಖ ಲಿಂಕುಗಳು:
- Budget: ಕರ್ನಾಟಕ ಬಜೆಟ್ 2026–27 ಗೃಹಲಕ್ಷ್ಮಿಗೆ ಸೀರೆ ಭಾಗ್ಯ+ ಇಂದಿರಾ ಕಿಟ್+ ನಿರುದ್ಯೋಗಿಗಳಿಗೆ ದೊಡ್ಡ ಸಿಹಿ ಸುದ್ದಿ!!
- PMSY: ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ಶ್ಯುರಿಟಿ ಇಲ್ಲದೆ ₹90,000 ಸಾಲ ಸೌಲಭ್ಯ!
- KSP: ಪೊಲೀಸ್ ಇಲಾಖೆಯಲ್ಲಿ 8167 ಹುದ್ದೆಗಳ ನೇಮಕಾತಿ! ಯಾವ ಇಲಾಖೆಯಲ್ಲಿಎಷ್ಟೆಷ್ಟು ಹುದ್ದೆಗಳು?
- DHFWS: ರಾಯಚೂರು ಆರೋಗ್ಯ ಇಲಾಖೆ ನೇಮಕಾತಿ! SSLC ಪಾಸ್+ಅರ್ಜಿಶುಲ್ಕ ಇಲ್ಲ

