ನೀವೇನಾದರು ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ಪ್ರಾರಂಭಿಸಬೇಕೆಂದು ಆಸಕ್ತಿಯನ್ನು ಹೊಂದಿದ್ದೀರಾ? ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪ್ರಾರಂಭಿಸುವುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8176 ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರವು ಅಧಿಕೃತ ಅನುಮೋದನೆ ನೀಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
KSP Recruitment in Kannada
ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆಯ ಫಲವಾಗಿ ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಒಟ್ಟು 56 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅವಕಾಶ ಕಲ್ಪಿಸಿದ್ದು, ಅದರಂತೆಯೇ ಕರ್ನಾಟಕ ಸರ್ಕಾರವು ನಿನ್ನೆ ಅಂದರೆ 04-03-2026 ರಲ್ಲಿ ಡಿಜಿ ಹಾಗೂ ಐಜಿಪಿ ಕಚೇರಿಯಲ್ಲಿ ಗೃಹ ಇಲಾಖೆಯ ಅಡಿಯಲ್ಲಿ ಒಟ್ಟು 8176 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಆದೇಶವನ್ನು ನೀಡಿದೆ.
ಕರ್ನಾಟಕ ಪೊಲೀಸ್ ಇಲಾಖೆ (KSP) ಯಲ್ಲಿ ಖಾಲಿ ಇರುವ ಒಟ್ಟು 8176 ಹುದ್ದೆಗಳನ್ನು ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರವು ಅವಕಾಶ ಕಲ್ಪಿಸಲಾಗಿದ್ದು, ಮಾರ್ಚ್ ತಿಂಗಳ 2 ನೇ ವಾರದಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗುವ ಸಾಧ್ಯತೆ ಇದೆ.
8176 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದ್ದು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಆಯ್ಕೆ ಪ್ರಕ್ರಿಯೆ, ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇದೆ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡ ರೀಡರ್.ಇನ್ ಗೆ ಭೇಟಿ ನೀಡಿ.

ಹುದ್ದೆಯ ಅವಲೋಕನ:
| ಇಲಾಖೆಯ ಹೆಸರು | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) |
| ಹುದ್ದೆಯ ಹೆಸರು | ವಿವಿಧ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | 8,176 ಹುದ್ದೆಗಳು |
| ಉದ್ಯೋಗ ಸ್ಥಳ | ಕರ್ನಾಟಕ |
| ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
ಹುದ್ದೆಯ ಕಿರು ವಿಮರ್ಶೆ:
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಯಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳ ನೇಮಕಾತಿಗೆ ಅವಕಾಶ ಕಲ್ಪಿಸಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು 8,176 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಒಂದಿಷ್ಟು ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ ಒಂದಿಷ್ಟು ಹುದ್ದೆಗಳ ಎಂದು ಮೀಸಲಿಡಲಾಗಿದೆ. ಜೊತೆಗೆ ಮೀಸಲಾತಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆಯ ವಿವರ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಯಲ್ಲಿ ಒಟ್ಟು 8,176 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಈ ಮೊದಲೇ ತಿಳಿಸಿರುವಂತೆ ಕಲ್ಯಾಣ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕೇತರ ವಲಯಗಳಾಗಿ ಹುದ್ದೆಗಳನ್ನು ವಿಂಗಡಿಸಲಾಗಿದೆ, ಯಾವ ಯಾವ ವಲಯಕ್ಕೆ ಎಷ್ಟೆಷ್ಟು ಹುದ್ದೆಗಳು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
1. ಕಲ್ಯಾಣ ಕರ್ನಾಟಕ ವಲಯಕ್ಕೆ ಮೀಸಲಿಡಲಾದ ಒಟ್ಟು ಹುದ್ದೆಗಳ ವಿವರ:
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ (CID) | 05 ಹುದ್ದೆಗಳು |
| ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (AR) | 275 ಹುದ್ದೆಗಳು |
| ಪೊಲೀಸ್ ಕಾನ್ಸ್ಟೇಬಲ್ (KSISF) | 364 ಹುದ್ದೆಗಳು |
| ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP) | 532 ಹುದ್ದೆಗಳು |
| ನಾಗರೀಕ ಪೊಲೀಸ್ ಕಾನ್ಸ್ಟೇಬಲ್ (Civil) | 610 ಹುದ್ದೆಗಳು |
2. ಕಲ್ಯಾಣ ಕರ್ನಾಟಕೇತರ ವಲಯಕ್ಕೆ ಮೀಸಲಿಡಲಾದ ಒಟ್ಟು ಹುದ್ದೆಗಳ ವಿವರ:
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ (CID) | 15 ಹುದ್ದೆಗಳು |
| ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (AR) | 1,375 ಹುದ್ದೆಗಳು |
| ಪೊಲೀಸ್ ಕಾನ್ಸ್ಟೇಬಲ್ (KSISF) | – |
| ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP) | 1,500 ಹುದ್ದೆಗಳು |
| ನಾಗರೀಕ ಪೊಲೀಸ್ ಕಾನ್ಸ್ಟೇಬಲ್ (Civil) | 3,500 ಹುದ್ದೆಗಳು |
ಶೈಕ್ಷಣಿಕ ಅರ್ಹತೆಗಳು:
- ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.
- ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ PUC ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ.
ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರ:
ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಕೆಳಗೆ ಅಭ್ಯರ್ಥಿಗಳು ಹೊಂದಿರಬೇಕಾದ ಅಂದಾಜು ವಯೋಮಿತಿಯನ್ನು ನೀಡಲಾಗಿದೆ.
- ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಯಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇದರ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೇಮಕಾತಿ ಅಧಿಸೂಚನೆ ಹೊರಬಿದ್ದಹೊರಡಿಸಿದ ನಂತರವಷ್ಟೇ ತಿಳಿದುಕೊಳ್ಳಬಹುದಾಗಿದೆ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಯ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗುತ್ತದೆ. ಯಾವ ಯಾವ ಹುದ್ದೆಗೆ ಎಷ್ಟೆಷ್ಟು ವೇತನ ನಿಗದಿಪಡಿಸಲಾಗಿದೆ ಎನ್ನುವುದನ್ನು ನೇಮಕಾತಿ ಅಧಿಸೂಚನೆ ಹೊರಬಿದ್ದ ನಂತರವಷ್ಟೇ ತಿಳಿದುಕೊಳ್ಳಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಸಾಮಾನ್ಯವಾಗಿ ಅಭ್ಯರ್ಥಿಗಳು ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಬೇಕಾದರೆ ಈ ಕೆಳಗೆ ನೀಡಲಾದ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಅವುಗಳೆಂದರೆ,
- ಅಭ್ಯರ್ಥಿಗಳ ಆಧಾರ್ ಕಾರ್ಡ್
- ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಅಭ್ಯರ್ಥಿಗಳ ಸಹಿ
- ಪಾಸ್ ಪೋರ್ಟ್ ಅಳತೆಯ ಫೋಟೋ
ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಸಾಮಾನ್ಯವಾಗಿ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿಸ್ ಅಲ್ಲಿಸಬೇಕಾಗುತ್ತದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ ಆರಂಭಗೊಳಲಿದ್ದು, ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಮೇಲೆ ನೀಡಲಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸಿದ್ದತೆಯನ್ನು ಮಾಡಿಕೊಳ್ಳುವುದು ಉತ್ತಮ.
ಹೊಸ ಮೀಸಲಾತಿ ನಿಯಮಗಳೊಂದಿಗೆ ಹುದ್ದೆಗಳ ಭರ್ತಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಯಡಿಯಲ್ಲಿ ಇರುವ ಒಟ್ಟು 8,176 ಹುದ್ದೆಗಳ ನೇಮಕಾತಿಯನ್ನು ಮೀಸಲಾತಿ ಅನ್ವಯ ನಡೆಸಲಿದ್ದು, ಯಾವ ಯಾವ ವರ್ಗಗಳಿಗೆ ಎಷ್ಟೆಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ ಎನ್ನುವುದನ್ನು ಈ ಕೆಳಗೆ ನೀಡಲಾಗಿದೆ.
- ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ನಿಗದಿಪಡಿಸಲಾದ ಮೀಸಲಾತಿಯನ್ನು ಶೇಕಡಾ 15% ಇಂದ 17% ಗೆ ಹೆಚ್ಚಿಸಲಾಯಿತು.
- ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ನಿಗದಿಪಡಿಸಲಾದ ಮೀಸಲಾತಿಯನ್ನು ಶೇಕಡಾ 3% ಇಂದ 7% ಗೆ ಹೆಚ್ಚಿಗೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ವಿಜ್ಞಾನ, ಇತಿಹಾಸ, ಸಂವಿಧಾನ, ಮಾನಸಿಕ ಸಾಮರ್ಥ್ಯ ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳು ಇರುತ್ತದೆ.
- ದೈಹಿಕ ಪರೀಕ್ಷೆ:
ಈ ಒಂದು ಹಂತದಲ್ಲಿ ಅಭ್ಯರ್ಥಿಗಳ ಎತ್ತರ, ತೂಕ, ಎದೆಯ ಅಳತೆ ಹಾಗೂ ಇನ್ನಿತರ ದೈಹಿಕ ಸಾಮರ್ಥ್ಯಗಳ ಕುರಿತು ಪರೀಕ್ಷೆ ನಡೆಸಲಾಗುತ್ತದೆ.
- ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ:
ನಂತರದ ಹಂತದಲ್ಲಿ ಆರೋಗ್ಯ ತಪಾಸಣೆಯನ್ನು ನಡೆದಲಾಗುತ್ತದೆ ಹಾಗೂ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ವಿವರಗಳು | ಪ್ರಮುಖ ದಿನಾಂಕಗಳು |
| ಹುದ್ದೆಯ ನೇಮಕಾತಿ ಅಧಿಸೂಚನೆ ಸೂಚನೆ ಪ್ರಕಟಗೊಂಡ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
| ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
| ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:
| ವಿವರಗಳು | ಪ್ರಮುಖ ಲಿಂಕುಗಳು |
| ಅಧಿಕೃತ ಅಧಿಸೂಚನೆ PDF ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಶೀಘ್ರದಲ್ಲೇ ಅರ್ಜಿ ಸಲ್ಲಿಸುವ ಲಿಂಕ್ ಪ್ರಕಟವಾಗಲಿದೆ |
ಅಂತಿಮ ತೀರ್ಮಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 8176 ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರವು ಅವಕಾಶ ಕಲ್ಪಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಮಾಡಬೇಕೆಂದು ಕನಸ್ಸು ಕಾಣುತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ಈ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭ ಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಂಡು ಅರ್ಜಿ ಸಲ್ಲಿಸಿ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 8176 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿಲ್ಲ. ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ನಂತರವಷ್ಟೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಕಲ್ಯಾಣ ಕರ್ನಾಟಕ ವಲಯದಲ್ಲಿ ಒಟ್ಟು 364 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದೆ.
ಕಲ್ಯಾಣ ಕರ್ನಾಟಕೇತರ ವಲಯದಲ್ಲಿ ಒಟ್ಟು 3,500 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ
ಇತರೆ ಪ್ರಮುಖ ಲಿಂಕುಗಳು:
- PMMVY: ರೂ.11,000 ಸಹಾಯಧನ! ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ಬಂಪರ್ ಗಿಫ್ಟ್!
- SSP Scholarship: ಸಮಯ ಯಾರಿಗೂ ಕಾಯಲ್ಲ! ಮಾರ್ಚ್ 15ರ ಒಳಗಡೆ SSP ಸ್ಕಾಲರ್ಶಿಪ್ಗೆ ಅಪ್ಲೈ ಮಾಡಿ.
- Heavy Rain Places: ಕರ್ನಾಟಕದ ಮಳೆಯ ಶ್ರೇಷ್ಠ ತಾಣಗಳು ಮತ್ತು ಪ್ರಕೃತಿ ವೈವಿಧ್ಯ

